ಎಜ್ರನು 5
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
3ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.
4ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.
5ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.
6ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.
7ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.
8ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.
9“ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.
10ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
11ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
12ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
13ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.
14ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.
15ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.
16ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.
17“ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath