ಗಲಾತ್ಯದವರಿಗೆ 1
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
5ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
6ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
9ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
15ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.
18ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.
21ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath