ಇಬ್ರಿಯರಿಗೆ 13
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
10ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
11ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
12ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.
13ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
14ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
22ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.
23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
24ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath