ಕ್ರಿಶ್ಚಿಯನ್ ಧರ್ಮ
ಹಿಂದೆ

ಇಬ್ರಿಯರಿಗೆ 1

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.

2ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

3ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

4ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.

5ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”

6ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

7ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

8ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.

10“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,

11ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.

12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.

13ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?

14ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath