ಕ್ರಿಶ್ಚಿಯನ್ ಧರ್ಮ
ಹಿಂದೆ

ಹೋಶೇಯನು 11

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.

2ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

3ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.

4ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.

5ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.

6ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.

7ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.

8ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.

9ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.

10ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;

11ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.

12ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath