ಕ್ರಿಶ್ಚಿಯನ್ ಧರ್ಮ
ಹಿಂದೆ

ಹೋಶೇಯನು 14

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

2ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

3ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

4ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.

5ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

6ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.

7ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

8ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.

9ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath