ಯೆಶಾಯನು 12
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath