ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಶಾಯನು 14

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

2ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.

3ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,

4ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!

5ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.

6ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.

7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.

8ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

9ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.

10ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.

11ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.

12ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

13ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

14ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!

15ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

16ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,

17ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.

18ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.

19ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,

20ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”

21ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.

22“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

23“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

24ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

25ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.

26ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

27ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ.

28ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:

29ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.

30ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.

31ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.

32ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath