ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಶಾಯನು 19

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.

2“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.

3ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

4ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.

5ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.

6ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.

7ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು, ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.

8ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.

9ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.

10ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.

11ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

12ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.

13ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.

14ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

15ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.

16ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.

17ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.

18ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

19ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.

20ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.

21ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.

22ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.

23ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

24ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.

25“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath