ಯೆಶಾಯನು 20
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.
2ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.
3ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”
4ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
5ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
6ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath