ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಶಾಯನು 21

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ

2ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

3ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.

4ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.

5ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!

6ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.

7ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.

8ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.

9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.

10ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.

11ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು

12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.

13ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.

14ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.

15ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

16ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.

17ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath