ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಶಾಯನು 28

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

2ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.

3ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

4ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.

5ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.

6ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.

7ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

8ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.

9ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?

10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.

11ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.

12ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.

13ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.

14ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,

15ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

16ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

17ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

18ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.

19ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.

20ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”

21ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.

22ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.

23ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?

25ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?

26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.

27ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.

28ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.

29ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath