ಯೆಶಾಯನು 29
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
2ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
3ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
4ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
5ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
6ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
7ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
8ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
9ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
10ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
11ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
12ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.
13ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
14ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
15ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
16ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
17ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
18ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
19ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
20ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
21ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
22ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
23ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
24ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath