ಯೆಶಾಯನು 32
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
3ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
4ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
5ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
6ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
7ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
9ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
10ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
13ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
14ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
15ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
16ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
17ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
18ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
20ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath