ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಶಾಯನು 35

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.

2ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

3ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

4ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

5ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

6ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

7ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.

8ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

9ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.

10ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath