ಯೆಶಾಯನು 56
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
2ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
3ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’” ಎಂದು ಅಂದುಕೊಳ್ಳದಿರಲಿ.
4ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
5ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
6ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
7ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
8ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
9ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
10ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
11ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
12“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath