ಕ್ರಿಶ್ಚಿಯನ್ ಧರ್ಮ
ಹಿಂದೆ

ನ್ಯಾಯಸ್ಥಾಪಕರು 15

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, “ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ” ಅಂದನು. ಅದಕ್ಕೆ ಅವನು, “ಹೋಗಬಾರದು;

2ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.

3ಆಗ ಸಂಸೋನನು, “ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ” ಎಂದುಕೊಂಡು ಹೋಗಿ

4ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,

5ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.

6ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.

7ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ

8ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.

9ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.

10ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, “ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು” ಎಂದು ಉತ್ತರಕೊಟ್ಟರು.

11ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.

12ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.

13ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.

14ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

15ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,

16“ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು” ಎಂದು ಹೇಳಿ,

17ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.

18ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

19ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.

20ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath