ನ್ಯಾಯಸ್ಥಾಪಕರು 17
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;
2ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.
3ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,
4ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.
5ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.
6ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.
7ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ
8ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.
9“ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
10ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು
11ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.
12ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,
13“ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು” ಅಂದುಕೊಂಡನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath