ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆರೆಮೀಯನು 19

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.

2ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.

3ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.

4“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.

5ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

6ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.

7ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.

8ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

9ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”

10ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,

11“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

12ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.

13ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

14ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,

15“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath