ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆರೆಮೀಯನು 24

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.

2ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

3ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.

4ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.

5“ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.

6ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

7ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

8ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.

9ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

10ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath