ಯೋಬನು 11
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಗ ನಾಮಾಥ್ಯನಾದ ಚೋಫರನು ಹೀಗೆಂದನು,
2“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?
3ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?
4‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.
5ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ!
6ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!
7ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
8ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು?
9ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ.
10ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?
11ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.
12ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.
13ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.
14ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.
15ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.
16ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.
17ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು.
18ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.
19ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
20ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath