ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 12

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು,

2“ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.

3ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.

4ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.

5ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.

6ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.

7ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;

8ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.

9ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?

10ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.

11ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.

12ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.

13ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.

14ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

15ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.

16ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.

17ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.

18ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.

19ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.

20ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.

21ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.

22ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.

23ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.

24ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.

25ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath