ಯೋಬನು 13
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.
2ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.
3ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.
4ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.
5ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.
6ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.
7ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?
8ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?
9ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ?
10ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
11ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?
12ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.
13ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ.
14ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.
15ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.
16ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ.
17ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.
18ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.
19ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.
20ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ.
21ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.
22ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.
23ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.
24ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?
25ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?
26ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.
27ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.
28ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath