ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 14

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.

2ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.

3ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?

4ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.

5ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.

6ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.

7ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!

8ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ,

9ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು.

10ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.

11ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ,

12ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.

13ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!

14ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.

15ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.

16ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!

17ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.

18ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,

19ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.

20ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.

21ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.

22ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath