ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 15

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,

2“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?

3ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?

4ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.

5ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.

6ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.

7ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?

8ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?

9ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?

10ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.

11ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?

12ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?

13ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!

14ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?

15ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.

16ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!

17ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.

18ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.

19ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.

20ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.

21ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.

22ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

23‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

24ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.

25ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.

26ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.

27ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.

28ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.

29ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.

30ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.

31ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,

32ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,

33ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.

34ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.

35ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath