ಯೋಬನು 16
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಗ ಯೋಬನು ಹೀಗೆ ಉತ್ತರಕೊಟ್ಟನು,
2“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.
3ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?
4ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
5ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.
6ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.
7ಆದರೆ ಈಗ ಆತನು ನನ್ನನ್ನು ಕುಂದಿಸಿದ್ದಾನೆ; (ದೇವಾ) ನೀನು ನನ್ನ ಬಳಗದವರನ್ನೆಲ್ಲಾ ಹಾಳು ಮಾಡಿದ್ದಿ.
8ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.
9ಆತನ ಸಿಟ್ಟು ನನ್ನನ್ನು ಸೀಳಿ ಹಿಂಸಿಸುತ್ತಿದೆ; ಆತನು ನನ್ನ ಮೇಲೆ ಹಲ್ಲು ಕಡಿದಿದ್ದಾನೆ, ಆತನು ನನ್ನ ಮೇಲೆ ದೃಷ್ಟಿಯನ್ನು ತೀಕ್ಷ್ಣ ಮಾಡಿದ್ದಾನೆ.
10ನನಗೆ ವಿರುದ್ಧವಾಗಿ ಹಲವರು ಗುಂಪುಕೂಡಿ ನನ್ನನ್ನು ಅಣಕಿಸಿ ಛೀಮಾರಿ ಹಾಕಿ, ನನ್ನ ದವಡೆಯ ಮೇಲೆ ಬಡಿದಿದ್ದಾರೆ.
11ದೇವರು ನನ್ನನ್ನು ಅಪರಿಶುದ್ಧರಿಗೆ ಒಪ್ಪಿಸಿ, ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾನೆ.
12ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.
13ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ. ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು, ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
14ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ.
15ಗೋಣಿಯನ್ನು ಹೊಲೆದು ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಕೊಂಬನ್ನು ಧೂಳಿನಲ್ಲಿ ತಗ್ಗಿಸಿಕೊಂಡಿದ್ದೇನೆ.
16ಕಣ್ಣೀರು ಸುರಿಯುವುದರಿಂದ ನನ್ನ ಮುಖವು ಕೆಂಪಾಗಿ ಹೋಗಿದೆ. ರೆಪ್ಪೆಯ ಮೇಲೆ ಮರಣಾಂಧಕಾರವು ಕವಿದಿದೆ.
17ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.
18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!
19ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
20ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.
21ನನ್ನ ನ್ಯಾಯವನ್ನು ದೇವರ ಮುಂದೆಯೂ, ಮಾನವನ ನ್ಯಾಯವನ್ನು ಅವನ ಮಿತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೆ ಕಣ್ಣೀರು ಸುರಿಸುತ್ತೇನೆ.
22ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath