ಯೋಬನು 17
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1“ನನ್ನ ಉಸಿರು ಕಟ್ಟುತ್ತಿದೆ , ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.
2ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.
3ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.
4ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.
5ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.
6ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.
7ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.
8ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
9ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.
10ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.
11ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.
12ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.
13ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.
14ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ,
15ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
16ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath