ಯೋಬನು 23
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಗ ಯೋಬನು ಇಂತೆಂದನು,
2“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?
3ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
4ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.
5ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.
6ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.
7ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.
8ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
9ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.
10ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
11ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.
12ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
13ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
14ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.
15ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.
16ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.
17ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath