ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 24

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?

2ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.

3ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.

4ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.

5ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು.

6ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.

7ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.

8ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.

9ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.

10ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.

11ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.

12ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.

13ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.

14ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.

15ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

16ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.

17ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.

18(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.

19ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು.

20ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.

21ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).

22ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.

23ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.

24ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.

25ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath