ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 26

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆಗ ಯೋಬನು ಹೀಗೆ ಉತ್ತರಕೊಟ್ಟನು,

2“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.

3ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!

4ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”

5ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.

6ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.

7ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.

8ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.

9ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.

10ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.

11ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.

12ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.

13ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.

14ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath