ಯೋಬನು 27
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,
2“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!
3ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,
4ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.
5ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.
6ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.
7ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ!
8ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
9ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?
10ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ?
11ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.
12ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?
13ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.
14ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.
15ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
16ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,
17ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
18ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.
19ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ.
20ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.
21ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.
22ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.
23ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath