ಯೋಬನು 28
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1“ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.
2ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
3ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
4ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
5ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.
6ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.
7ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.
8ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.
9ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
10ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.
11ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.
12ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
13ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
14ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.
15ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.
16ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.
17ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
18ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
19ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.
20ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
21ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
22ನಾಶನವೂ , ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.
23ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
24ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.
25ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.
26ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,
27ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.
28ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath