ಯೋಬನು 30
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.
2ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.
3ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.
4ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು.
5ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.
6ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.
7ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.
8ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.
9ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.
10ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.
11ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
12ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.
13ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.
14ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.
15ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.
16ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.
17ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.
18ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.
19ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ.
20ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.
21ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.
22ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ.
23ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.
24ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?
25ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.
26ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.
27ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ.
28ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.
29ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.
30ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
31ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath