ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 31

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

2ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?

3ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?

4ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.

5ಒಂದು ವೇಳೆ ನಾನು ಕಪಟತನದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿದರೆ,

6ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

7ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,

8ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!

9ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,

10ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ!

11ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು.

12ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು.

13ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ

14ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?

15ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.

16ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?

17ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?

18ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.

19ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ,

20ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?

21ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?

22ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ.

23ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.

24ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,

25ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,

26ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ,

27ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,

28ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು.

29ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?

30ಇಲ್ಲವೇ ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ.

31ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?

32ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.

33ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,

34ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,

35ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!

36ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.

37ಪ್ರಭುವಿನಂತೆ ಆತನ ಸಾನ್ನಿಧ್ಯದಲ್ಲಿ ಪ್ರವೇಶಿಸಿ ನನ್ನ ಹೆಜ್ಜೆಗಳ ಲೆಕ್ಕವನ್ನು, ಆತನಿಗೆ ಅರಿಕೆಮಾಡಿಕೊಳ್ಳುತ್ತಿದ್ದೆನು.

38ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,

39ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,

40ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath