ಯೋಬನು 35
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆ ಮೇಲೆ ಎಲೀಹು ಮತ್ತೆ ಇಂತೆಂದನು,
2“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?
3ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?
4ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.
5ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!
6ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?
7ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?
8ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
9ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
10‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
11ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
12ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.
13ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.
14ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
15ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
16ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath