ಯೋಬನು 36
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಮೇಲೆ ಎಲೀಹು ಮತ್ತೆ ಹೀಗೆಂದನು,
2“ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.
3ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.
4ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
5ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.
6ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.
7ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
8ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
9ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.
10ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.
11ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.
12ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.
13ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
14ಯೌವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು.
15ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.
16ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.
17ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.
18ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!
19ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?
20ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.
21ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.
22ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?
23ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?
24ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.
25ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; ಆದರೆ ನರನು ದೂರದಿಂದ ನೋಡುತ್ತಾನಷ್ಟೆ.
26ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.
27ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.
28ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು.
29ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?
30ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.
31ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.
32ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.
33ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath