ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 39

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?

2ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ?

3ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು.

4ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ.

5ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?

6ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.

7ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.

8ಅದರ ಕಾವಲು ವಿಶಾಲವಾದ ಬೆಟ್ಟಗಳೇ. ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು.

9ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ?

10ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?

11ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?

12ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?

13ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?

14ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.

15ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.

16ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

17ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

18ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.

19ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ?

20ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.

21ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.

22ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು.

23ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.

24ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು.

25ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.

26ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?

27ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?

28ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.

29ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.

30ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath