ಯೋಬನು 3
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
2ಯೋಬನು ಇಂತೆಂದನು,
3“ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ
4ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
5ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.
6ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
7ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.
8ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
9ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
10ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.
11ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
12ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?
13ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.
14ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.
15ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
16ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
17ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.
18ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
19ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.
20ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
21ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
22ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.
23ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?
24ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
25ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.
26ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath