ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 40

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇದಲ್ಲದೆ ಯೆಹೋವನು ಯೋಬನಿಗೆ,

2“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.

3ಆಗ ಯೋಬನು ಯೆಹೋವನಿಗೆ ಉತ್ತರವಾಗಿ,

4“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.

5ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.

6ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,

7“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

8ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?

9ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?

10ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.

11ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

12ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.

13ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.

14ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.

15ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.

16ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.

17ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.

18ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.

19ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.

20ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;

21ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.

22ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.

23ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.

24ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath