ಯೋಬನು 41
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ?
2ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?
3ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?
4ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?
5ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ?
6ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ?
7ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ?
8ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ.
9ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.
10ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?
11ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.
12ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.
13ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?
14ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ.
15ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.
16ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ.
17ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ.
18ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.
19ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು.
20ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.
21ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.
22ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.
23ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
24ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
25ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.
26ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.
27ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.
28ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.
29ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.
30ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.
31ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು.
32ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.
33ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ.
34ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath