ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋಬನು 8

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,

2“ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?

3ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?

4ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?

5ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,

6ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.

7ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.

8ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.

9ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.

10ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?

11ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?

12ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.

13ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.

14ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.

15ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.

16ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ

17(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.

18ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.

19ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!

20ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.

21ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.

22ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath