ಯೋಬನು 9
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು,
2“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?
3ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.
4ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
5ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.
6ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.
7ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.
8ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.
9ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ.
10ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
11ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.
12ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
13ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.
14ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.
15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
16ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.
17ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,
18ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.
19ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
20ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.
21ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.
22ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.
23ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.
24ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?
25ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.
26ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.
27ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,
28ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.
29ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?
30ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,
31ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.
32ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?
33ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.
34ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.
35ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath