ಕ್ರಿಶ್ಚಿಯನ್ ಧರ್ಮ
ಹಿಂದೆ

ಯೋನನು 1

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,

2“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.

3ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

4ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.

5ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.

6ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.

7ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.

8ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು

9ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,

10ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.

11ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.

12ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.

13ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.

14ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.

15ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.

16ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.

17ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath