ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಹೋಶುವನು 18

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

2ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.

3ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?

4ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

5ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.

6ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.

7ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು

8ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.

9ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.

10ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.

11ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.

12ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

13ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.

14ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.

15ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ

16ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.

17ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,

18ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.

19ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.

20ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.

21ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

22ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,

23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,

24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;

25ಗಿಬ್ಯೋನ್, ರಾಮಾ, ಬೇರೋತ್,

26ಮಿಚ್ಪೆ, ಕೆಫೀರಾ, ಮೋಚಾ,

27ರೆಕೆಮ್, ಇರ್ಪೇಲ್, ತರಲಾ,

28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath