ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಹೋಶುವನು 20

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಯೆಹೋಶುವನನ್ನು ಕುರಿತು,

2“ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;

3ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

4ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ

5ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.

6ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.

7ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

8ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.

9ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath