ಯೆಹೋಶುವನು 21
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
2“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು
3ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
4ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.
5ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
6ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
7ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು
8ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
9ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.
10ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
11ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.
12ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
13ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
14ಯತ್ತೀರ್, ಎಷ್ಟೆಮೋಹ,
15ಹೋಲೋನ್, ದೆಬೀರ್,
16ಅಯಿನ್, ಯುಟ್ಟಾ, ಬೇತ್ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
17ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,
18ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
19ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
20ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
21ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,
22ಗೆಜೆರ್, ಕಿಬ್ಚೈಮ್ ಹಾಗೂ ಬೇತ್ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
23ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,
24ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
25ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
26ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
27ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
28ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
29ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
30ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
31ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
32ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
33ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
34ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,
35ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.
36ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,
37ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
38ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
39ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.
40ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.
41ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.
43ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
44ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.
45ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath