ಯೆಹೋಶುವನು 23
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.
2ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.
3ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.
4ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.
5ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.
6ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.
7ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.
8ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.
9ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.
10ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.
11ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.
12ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,
13ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.
14ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
15ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.
16ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath