ಪ್ರಲಾಪಗಳು 4
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
2ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
3ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.
4ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
5ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
6ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
7ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
8ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
9ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
10ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
11ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.
12ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
13ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
14ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
15ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
16ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
17ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
18ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
19ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
20ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
21ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
22ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath