ಲೂಕನು 3
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ
2ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
3ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.
4ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
7ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
8ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.
10ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,
11ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.
12ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,
13ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.
14ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
15ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
16ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.
17ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
18ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.
19ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
20ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.
21ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು
22ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
23ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;
24ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು;
25ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು;
26ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು;
27ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;
28ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು;
29ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು;
30ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು;
31ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು;
32ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;
33ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು;
34ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು;
35ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು;
36ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;
37ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು;
38ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath