ಮಲಾಕಿಯನು 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.
2ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
3ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
4ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
5“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.
6ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
7ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
8“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
9“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
10ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
11ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.
12ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.
13ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
14“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
15ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
16ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”
17ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath